ಮನೆ ಕಳ್ಳತನ ಮಾಡುತಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕರೊಗಿ ಗ್ರಾಮದಲ್ಲಿ ಸುಮಾರು 2-3 ಮನೆಗಳನ್ನು ಸರಣಿ ಕಳ್ಳತನ ಮಾಡಿ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಶುಕ್ರವಾರ ಸಾಯಂಕಾಲ 5ಗಂಟೆ ಸುಮಾರಿಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಮಾಧ್ಯಮಕ್ಕೆ ಮಾಹಿತಿ ನೀಡಿದರು.