ಹುಬ್ಬಳ್ಳಿ: ಹಣ ಹೂಡಿಕೆ ಮಾಡಿದರೆ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿದ ಅಪರಿಚಿತರು ನಗರದ ಶ್ರೀಕಾಂತ ಮೆಹರವಾಡೆ ಎಂಬುವರಿಗೆ ೧೧ ಲಕ್ಷ ರೂ. ವಂಚಿಸಿದ ಪ್ರಕರಣ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶ್ರೀಕಾಂತ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಹೈದರಾಬಾದನ ಎ.ವಿ. ಇನ್ವೇಸ್ಟಮೆಂಟ್ ಸಲೂಷನ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಶೇ. ೬ ರಷ್ಟು ಲಾಭಾಂಶ ನೀಡುವುದಾಗಿ ನಂಬಿಸಿದ್ದಾರೆ. ಬಳಿಕ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.