66/11 ಕೆ.ವಿ ಕೆ.ಐ.ಎ.ಡಿ.ಬಿ, ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಸೆ.6 ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕೆ.ಐ.ಎ.ಡಿ.ಬಿ ವಿದ್ಯುತ್ ವಿತರಣಾ ಕೇಂದ್ರದ ಪ್ರದೇಶಗಳಾದ ನಗರ ಪ್ರದೇಶಗಳಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕ ಬಡಾವಣೆಗಳು, ಎಂ.ಸಿ.ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ದಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ ಹಾಗೂ ಗ್ರಾಮಾಂತರ ಪ್ರದೇಶಗಳಾದ ಶ್ರೀನಿವಾಸಪುರ ಗೇಟ್, ಹನಕೆರೆ ಐ.ಪಿ ವ್ಯಾಪ್ತಿ, ಕೀಲಾರ ಐ.ಪಿ ವ್ಯಾಪ್ತಿ, ಬಸವನಪುರ ಐ.ಪಿ. ವ್ಯಾಪ್ತಿ, ಬೂದನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವ್ಯತ್ಯಯ ಉಂಟಾಗಲಿದೆ.