ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಶಿವಮೊಗ್ಗದ ರೈಲ್ವೆ ನಿಲ್ದಾಣ ಆವರಣದಲ್ಲಿ ಆಟೋರಿಕ್ಷಾ ಪ್ರೀ-ಪೇಯ್ಡ್ ಕೌಂಟರ್ ತೆರೆಯಲು ಸಿದ್ಧತೆ ನಡೆಸಿದ್ದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಮಂಗಳವಾರ ರಾತ್ರಿ 7:30 ಕ್ಕೆ ಪರಿಶೀಲನೆ ನಡೆಸಿದರು. ಆಟೋ ಕೌಂಟರ್ ತೆರಯುವ ಸ್ಥಳವನ್ನ ಎಸ್ಪಿ ಪೊಲೀಸ್ ಸಿಬ್ಬಂದಿಗಳ ಸಮ್ಮುಖದಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಎಎಸ್ಪಿ ಕಾರಿಯಪ್ಪ, ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ಇದ್ದರು