ಚಳ್ಳಕೆರೆ:ಬಿಜೆಪಿ ಜಿಲ್ಲಾ ಘಟಕದ ನೂತನ ಅಧಕ್ಷರಾಗಿ ಕೆ ಟಿ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಈ ಹಿಂದೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರೂ ಆಗಿದ್ದ ಇವರು ಚಳ್ಳಕೆರೆ ವಿಧಾನಸಭೆ ಎಸ್‌ಟಿ ಮೀಸಲು ಕ್ಷೇತ್ರದಿಂದ 3 ಬಾರಿ ಸ್ಪರ್ಧಿಸಿ ಸೋಲು ಕಂಡಿದ್ದರು. 2013ರಲ್ಲಿ ಕೆಜೆಪಿಯಿಂದ, 2018ರಲ್ಲಿ ಬಿಜೆಪಿ, 2023ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸೋತಿದ್ದರು. ಬಳಿಕ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದರು. ನಂತರ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಇವರನ್ನು ಜಿಲ್ಲಾ ಘಟಕದ ಆಯ್ಕೆ ಮಾಡಲಾಗಿದೆ.