ಯಲ್ಲಾಪುರ:ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಮತ್ತು ಜೀವನ ಕೌಶಲ್ಯಗಳ ಕುರಿತು ನಡೆದ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕಾಲೇಜಿನ ಪ್ರಾಂಶುಪಾಲ ಡಾ. ಆರ್. ಡಿ. ಜನಾರ್ಧನ್ ಮಾತನಾಡಿ, ಕೇವಲ ಶೈಕ್ಷಣಿಕ ಸಾಧನೆಯಿಂದ ಮಾತ್ರ ಯಶಸ್ಸು ಸಾಧ್ಯವಿಲ್ಲ. ನಮ್ಮ ವ್ಯಕ್ತಿತ್ವವನ್ನು ರೂಪಿಸುವ ಜೀವನ ಕೌಶಲ್ಯಗಳು ಅತ್ಯಂತ ಪ್ರಮುಖವಾಗಿವೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಹಕಾರಿಯಾಗಿವೆ" ಎಂದರು.ನಿವೃತ್ತ ಪ್ರಾಂಶುಪಾಲ,ಸಾಹಿತಿ ಶ್ರೀರಂಗ ಕಟ್ಟಿ ಮಾತನಾಡಿವಿದ್ಯಾರ್ಥಿ ದೆಸೆಯಲ್ಲಿ ನಾವು ಕಲಿಯುವ ಪಾಠಗಳು ನಮ್ಮ ಜೀವನದುದ್ದಕ್ಕೂ ಮಾರ್ಗದರ್ಶನ ನೀಡುತ್ತದೆಎಂದರು.