ಯಾದಗಿರಿ ತಾಲೂಕಿನ ಅಲ್ಲಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಬಳಿಯಲ್ಲಿರುವ ರಸ್ತೆ ಹಾಳಾಗಿದ್ದರಿಂದ ಸಾರ್ವಜನಿಕರ ಹೋರಾಟಕ್ಕೆ ತುಂಬಾ ತೊಂದರೆ ಉಂಟಾಗಿದ್ದು ಇದರಿಂದ ಬೇಸತ್ತ ಸಾರ್ವಜನಿಕರು ಭಾನುವಾರ ಬೆಳಗ್ಗೆ ಹಾಳಾಗಿರುವ ರಸ್ತೆಯಲ್ಲಿ ಭತ್ತದ ಸಸಿ ನೆಟ್ಟು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ರಸ್ತೆ ದುರಸ್ತಿಗೊಳಿಸುವಂತೆ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು ಅಧಿಕಾರಿಗಳಿಗೆ ತಿಳಿಸಿದರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಗೆ ಗ್ರಾಮ ಒಳಪಟ್ಟಿದ್ದು ರಸ್ತೆ ದುರಸ್ತಿಗೊಳಿಸಲು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.