2025-26ನೇ ಸಾಲಿನ ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯ ವಲಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಮೀನುಗಾರರು ಮತ್ತು ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನಕ್ಕಾಗಿ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ