ಗಣಪತಿ ಹಬ್ಬ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಚಾಮರಾಜನಗರದಲ್ಲಿ ಎಸ್ಪಿ ಡಾ.ಬಿ.ಟಿ.ಕವಿತಾ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಚಾಮರಾಜನಗರದ ಪೇಟೆ ಪ್ರೈಮರಿ ಶಾಲೆಯಿಂದ ಎಸ್ಪಿ ಡಾ.ಬಿ.ಟಿ.ಕವಿತಾ ನೇತೃತ್ವದಲ್ಲಿ ಬುಧವಾರ ಸಂಜೆ ಆರಂಭಗೊಂಡ ಪಥ ಸಂಚಲನವು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ರಸ್ತೆ, ಗುಂಡ್ಲುಪೇಟೆ ಸರ್ಕಲ್, ಚಿಕ್ಕಂಗಡಿ- ದೊಡ್ಡಂಗಡಿ ಬೀದಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಚಾಮರಾಜನಗರ ಪಟ್ಟಣ, ಪೂರ್ವ, ಗ್ರಾಮಾಂತರ ಠಾಣೆ ಮೀಸಲು ಹಾಗೂ ಟ್ರಾಫಿಕ್ ಠಾಣೆ ಪೊಲೀಸರು ಪಥ ಸಂಚಲನ ನಡೆಸಿದರು.