ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಸಮಯದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಆ.27ರಿಂದ ಗಣೇಶ ಮೂರ್ತಿಗಳ ವಿಸರ್ಜನೆ ಮುಗಿಯುವ ತನಕ ಹಾಗೂ ಈದ್ ಮಿಲಾದ್ ಹಬ್ಬದ ಸಮಯದಲ್ಲಿ ಹಾವೇರಿ.ಜಿಲ್ಲಾದ್ಯಂತ ಡಿಜೆ ಸಿಸ್ಟಂ ಬಳಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.