ಜಿಎಸ್ ಟಿ ದರ ಇಳಿಕೆಗೆ ರಾಜ್ಯ ಸರ್ಕಾರಗಳು ಸತತವಾಗಿ ಹೇರುತ್ತಾ ಬಂದಿರುವ ಒತ್ತಡ ಮುಖ್ಯ ಕಾರಣ ಎನ್ನುವುದು ಸ್ಪಷ್ಟವಾಗಿದೆ. ಇದನ್ನು ಪ್ರಾರಂಭದಲ್ಲಿಯೇ ಮಾಡಿದ್ದರೆ ದೇಶದ ಜನತೆ ‘’ಗಬ್ಬರ್ ಸಿಂಗ್ ತೆರಿಗೆ” ವ್ಯವಸ್ಥೆಯಿಂದ ಪಡಬಾರದ ಕಷ್ಟಗಳನ್ನು ಪಡಬೇಕಾದ ಪರಿಸ್ಥಿತಿ ಇರುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಸಂಜೆ ೬ ಗಂಟೆ ಸುಮಾರಿಗೆ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ ತೆರಿಗೆ ಮಂಡಳಿಯ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.