ರೈಲ್ವೇ ಇಲಾಖೆಯ ಬೆಂಗಳೂರು ವಿಭಾಗದ ಕ್ರೀಡಾ ಸಂಘದ ವತಿಯಿಂದ ಆಗಸ್ಟ್ 31ರಂದು ಕಂಠೀರವ ಕ್ರೀಡಾಂಗಣದಲ್ಲಿ ಓಟವನ್ನು ಆಯೋಜಿಸುವ ಮೂಲಕ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು. ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ಅಶುತೋಷ್ ಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ಬೆಳಿಗ್ಗೆ 8 ಗಂಟೆಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರೈಲ್ವೆ ಇಲಾಖೆಯ ಅಧಿಕಾರಿಗಳು ಮತ್ತು ಅವರ ಕುಟುಂಬ ಸದಸ್ಯರು ಭಾಗವಹಿಸಿದ್ದರು. 5 , 10 ಮತ್ತು 15 ಕಿಮೀ ವಿಭಾಗಗಳ ಓಟದಲ್ಲಿ 50ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.