ನಿರಂತರ ಸುರಿದ ಮಳೆಯಿಂದ ರೈತರ ಬೆಳೆಗಳು ಹಾನಿಯಾಗಿದ್ದು, ರೈತರಿಗೆ ಬೆಳೆಹಾನಿ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ ನಡೆಸಿದೆ. ಧಾರವಾಡ ತಾಲೂಕಿನ ವಿವಿಧ ಗ್ರಾಮಗಳ ರೈತರು ಎತ್ತು, ಚಕ್ಕಡಿಗಳನ್ನು ತೆಗೆದುಕೊಂಡು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಆಗಮಿಸಿ ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.