ಗುರುವಾರ ಸಂಜೆ 5ಕ್ಕೆ ಬಿಜೆಪಿ ಪದಾಧಿಕಾರಿಗಳು ನಗರ ಪೊಲೀಸ್ ಠಾಣೆಗೆ ತೆರಳಿ ಕೆ.ಇ.ಬಿ. ಬಳಿಯ ನಿವಾಸಿ ಹಾಗೂ ತರಕಾರಿ ವ್ಯಾಪಾರಿ ರವಿಕಾಂತ್ ತೆಂಡೂಲ್ಕರ್ ಅವರ ಮೇಲೆ ಕಾರವಾರದ ಜುಬೇರ್ ಮುಸ್ತಫಾ ಮತ್ತು ಅಲ್ಲಾ ಭಕ್ಷ ಸೇರಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ. ಇಲ್ಲದ ಪಕ್ಷದಲ್ಲಿ ಮುಂದಿನ ದಿನ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಕಾರವಾರ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದ ಕಾರ್ಯಕರ್ತರು ಕಾರವಾರ ನಗರ ಪೊಲೀಸ್ ಠಾಣೆಯ ಪಿಎಸ್ಐ ಅಂಬಿಗ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಿವಂತೆ ಕೋರಿದ್ದಾರೆ.