ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಭಾನುವಾರ ರಾತ್ರಿ 9 ಗಂಟೆಗೆ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಹಾಗೂ ಪಾದಾಚಾರಿ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಸಂಚಾರಿ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕಿ ಮುಂದಿನ ಕಾನೂನು ಕ್ರಮ ಜರುಗಿದ್ದಾರೆ.