ಹಾಸನ: ಹಾಸನ ಜಿಲ್ಲಾ ಪಂಚಾಯತಿ ಹೊಯ್ಸಳ ಸಭಾಂಗಣದಲ್ಲಿ ಇಂದು ಕಂದಾಯ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಇಂದು ಶ್ರೀ ಹಾಸನಾಂಬ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿಯವರ. ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರಾದ ಕೃಷ್ಣ ಬೈರೇಗೌಡ, ಹಾಸನಾಂಬೆ ಉತ್ಸವದಲ್ಲಿ ವಿಐಪಿ ಹಾಗೂ ವಿವಿಐಪಿ ಭಕ್ತರಿಂದ ಸಾಮಾನ್ಯ ಭಕ್ತರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ದರ್ಶನಕ್ಕೆ ಸಮಯ ನಿಗದಿಪಡಿಸುವಂತೆ ಸಲಹೆ ನೀಡಿದರು."ಗೋಲ್ಡ್ ಕಾರ್ಡ್ ಭಕ್ತರಿಗೆ ಎರಡು ಗಂಟೆ, ಶಿಷ್ಟಾಚಾರ ಭಕ್ತರಿಗೆ ಎರಡು ಗಂಟೆ ಮಾತ್ರ ಅವಕಾಶ ನೀಡಿದರೆ ಸಾಮಾನ್ಯ ಜನರಿಗೆ ದರ್ಶನ ಸುಗಮವಾಗುತ್ತದೆ' ಎಂದು ಅವರು ತಿಳಿಸಿದರು.