ಚಿತ್ರದುರ್ಗ:-ಪೂರ್ವ ವಲಯ ಐ.ಜಿ.ಪಿ ರವರಾದ ಡಾ.ಬಿ.ಆರ್ ರವಿಕಾಂತೇಗೌಡ ಅವರು ಬುಧವಾರ ಸಂಜೆ 6 ಗಂಟೆಗೆ ಚಿತ್ರದುರ್ಗ ನಗರದ ಜಿಲ್ಲಾ ಪೊಲೀಸ್ ಕಛೇರಿಗೆ ಆಗಮಿಸಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸೆಪ್ಟೆಂಬರ್ 13ರಂದು ನಡೆಯಲಿರುವ ಶೋಭಾಯಾತ್ರೆ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು ಹಾಗೂ ಶೋಭಾಯಾತ್ರೆಯ ಬಂದೋಬಸ್ತ್ ಸಮಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು,ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಇದ್ದರು.