ಹಾಸನ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಆದರಿಸಿ ದಾಳಿ ಮಾಡಿ 50 ಕೆಜಿ ತೂಕದ 75 ಚೀಲ ಅಕ್ಕಿ ಮೂಟೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಅರಕಲಗೋಡು ತಾಲೂಕಿನ ಕಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರಕಲಗೂಡಿನಿಂದ ಕೆಎ 13 ಸಿ. -4594 ನಂಬರ್ ನ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಪಡಿತರವನ್ನು ಹೊಳೆನರಸಿಪುರಕ್ಕೆ ಸಾಗಾಟ ಮಾಡುತ್ತಿದ್ದರು.ಈ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆಹಾರ ನಿರೀಕ್ಷಕ ಮಂಜು ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು ಚಾಲಕ ನಾರಾಯಣ ಎಂಬುವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.