ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಧ್ವನಿವರ್ಧಕ ಬಳಕೆ ಮಾಡಲು ಅನುಮತಿ ನೀಡುವಂತೆ ಒತ್ತಾಯಿಸಿ ವಿವಿಧ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಡಿಸಿಯವರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಕೆ ಮಾಡಿದ ಮುಖಂಡರು ಸಡಗರ ಸಂಭ್ರಮದಿಂದ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.