ಸತತ ಮಳೆ ಕಾರಣ ತಾಲೂಕಿನ ಗಾಂಧಿನಗರ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಶಾಲಾ ಮಕ್ಕಳು, ಗ್ರಾಮಸ್ಥರು ಆ ಮೂಲಕ ತೆರಳುವ ಜನರು ಪ್ರತಿನಿತ್ಯ ತೀವ್ರ ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ವರ್ಷ ಮಳೆಗಾಲ ಬಂತಂದ್ರೆ ಸಾಕು ಗ್ರಾಮಸ್ಥರಿಗೆ ಈ ಸಮಸ್ಯೆ ತಪ್ಪಿತಲ್ಲ.ಸಂಬಂಧಪಟ್ಟ ಅಧಿಕಾರಿಗಳು ಇದರತ್ತ ಗಮನಹರಿಸಿ ಸಮಸ್ಯೆ ಶೀಘ್ರ ಬಗೆಹರಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಗೊರಖ ಶುಕ್ರವಾರ ಬೆಳಿಗ್ಗೆ 9ಕ್ಕೆ ಮನವಿ ಮಾಡಿದರು.