ಹಾಸನ: ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಿದ ಕರವೇ ರಾಜ್ಯಾಧ್ಯಕ್ಷ ಟಿಆರ್ ನಾರಾಯಣಗೌಡ ಅವರನ್ನು ನಗರದ ಬೈಪಾಸ್ ರಸ್ತೆಯಲ್ಲಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿ ಸಾವಿರಾರು ಕಾರುಗಳ ಮೂಲಕ ಅವರನ್ನು ಮೆರವಣಿಗೆ ಮೂಲಕ ಕರೆತಂದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಹಿತಿ ಬಾನು ಮುಷ್ಕಾಕ್ ಅವರು ದಸರಾ ಉದ್ಘಾಟನೆ ಮಾಡುವುದಕ್ಕೆ ಅಭ್ಯಂತರವಿಲ್ಲ. ಆದರೆ, ಇಲ್ಲಿಯವರೆಗೂ ಯಾವ ಸಂಪ್ರದಾಯ ನಡೆದುಕೊಂಡು ಬಂದಿದೆಯೋ ಅದೇ ಸಂಪ್ರದಾಯದಂತೆ ದಸರಾ ಉದ್ಘಾಟನೆ ಆಗಬೇಕು ಎಂದು ಹೇಳಿದರು.ರಾಜಕೀಯ ಒತ್ತಡ, ಸ್ವಂತ ಆಲೋಚನೆಗಳ ಆಧಾರದ ಮೇಲೆ ದಸರಾ ಉದ್ಘಾಟನೆ ಮಾಡುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.