Download Now Banner

This browser does not support the video element.

ಗಂಗಾವತಿ: ನಗರದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣ ಆಹಾರ, ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಸೋಮಶೇಖರ ಹುದ್ದೆಯಿಂದ ಬಿಡುಗಡೆ

Gangawati, Koppal | Aug 30, 2025
ಜಿಲ್ಲೆಯ ಗಂಗಾವತಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಪ್ರಕರಣ ಬಯಲಿಗೆ ಬಂದಿದ್ದರಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲೆಯ ಉಪನಿರ್ದೇಶಕ ಸೋಮಶೇಖರ ಬಿರಾದಾರನನ್ನು ಈ ಹುದ್ದೆಯಿಂದ ಬಿಡುಗಡೆ ಮಾಡಿ ಮಾತೃ ಇಲಾಖೆಗೆ ತೆರಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಆಗಸ್ಟ್ 30 ರಂದು ಮಧ್ಯಾಹ್ನ 2-30 ಗಂಟೆಗೆ ಸೋಮಶೇಖರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಈ ಹುದ್ದೆಯಿಂದ ಉಪನಿರ್ದೇಶಕ ಸ್ಥಾನಕ್ಕೆ ನಿಯೋಜನೆಗೊಂಡು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿಯೂ ಕೆಲಸ ನಿರ್ವಹಿಸುತ್ತಿದ್ದರು.
Read More News
T & CPrivacy PolicyContact Us