ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆ ಇಂದ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿದ್ದು, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್ ಸೇರಿದಂತೆ ವಸತಿ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳು ಭಾಗಿಯಾಗಿದ್ದಾರೆ, ಇನ್ನು ಈ ಸಭೆಯಲ್ಲಿ ವಸತಿ ಇಲಾಖೆಗೆ ಸಂಬಂಧಿಸಿ ಸಿಎಂ ಸಭೆ ನಡೆಸುತ್ತಿದ್ದು, ಕಾಮಗಾರಿಗಳ ಅಭಿವೃದ್ದಿ ಕುರಿತಂತೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ಮಾಡಲಿದ್ದಾರೆ.