ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ಆರೋಪಿ ಫಯಾಜ್ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ ಎಂದು ನೇಹಾ ಹಿರೇಮಠ ತಂದೆ ನಿರಂಜನಯ್ಯಾ ಹಿರೇಮಠ ಮಾಹಿತಿ ನೀಡಿದರು. ಧಾರವಾಡ ನಗರದಲ್ಲಿ ಬುಧವಾರ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಆರೋಪಿ ಫಯಾಜ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ನಮ್ಮ ವಕೀಲರಿಂದಲ್ಲೂ ಅರ್ಜಿ ಸಲ್ಲಿಸಲಾಗಿತ್ತು.