ವಿಜಯಪುರ ನಗರದಲ್ಲಿ ಗಜಾನನ ಮಹಾಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ಬುಧುವಾರ ರಾತ್ರಿ 8ಗಂಟೆ ಸುಮಾರಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭಾಗಿಯಾಗಿದ್ದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಗಣೇಶ ಮಹಾಮಂಡಳಿಯವರು ಪರಿಸರ ಹಿತ ದೃಷ್ಟಿಯಿಂದ ಮಣ್ಣಿನ ಗಣಪಗಳನ್ನು ಪ್ರತಿಷ್ಠಾಪನೆ ಮಾಡಬೇಕು ಮತ್ತು ಯಾವುದೇ ಅಹಿತಕರ ಘಟನೆ ಆಗದಂತೆ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಹಾಮಂಡಳಿಯ ಪದಾಧಿಕಾರಿಗಳು ಹಾಗೂ ಹಿಂದೂ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.