ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಕಲ್ಮಠದಲ್ಲಿ ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಅವರು ದಸರಾ ಮಹೋತ್ಸವದ ಕುರಿತು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 5 ನೇ ತಾರೀಖಿನವರೆಗೆ ನಡೆಯುವ ಸುವರ್ಣ ದಸರಾ ಮಹೋತ್ಸವದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ಸು ಗೊಳಿಸುವಂತೆ ಮನವಿ ಮಾಡಿದರು. ಶ್ರೀಮಠದ ಪೂಜ್ಯರ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯು ಮಾತನಾಡಿದರು. ಶಾಸಕ ಜಿ ಹಂಪಯ್ಯ ನಾಯಕ, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಇತರರು ಉಪಸ್ಥಿತರಿದ್ದರು.