Download Now Banner

This browser does not support the video element.

ಕಾರವಾರ: ಕರಾವಳಿಯಲ್ಲಿ ಭಾರಿ ಮಳೆ ಐದು ತಾಲೂಕಿನ ಶಾಲೆಗಳಿಗೆ ರಜೆ; ನಗರದಲ್ಲಿ ಜಿಲ್ಲಾಡಳಿತ ಆದೇಶ

Karwar, Uttara Kannada | Aug 29, 2025
ಜಿಲ್ಲೆಯ ಕರಾವಳಿಯಲ್ಲಿ ಶುಕ್ರವಾರ ಬೆಳಗ್ಗೆ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಐದು ತಾಲೂಕಿನ ಶಾಲೆಯ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಶುಕ್ರವಾರ ಬೆಳಗ್ಗೆ 8 ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕರಾವಳಿಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆಯ ಪರಿಸ್ಥಿತಿಯನ್ನು ಗಮನಿಸಿ ಆಯಾ ತಾಲೂಕಿನ ತಹಸೀಲ್ದಾರ್ ಹಾಗೂ ಬಿಇಒಗಳಗೆ ರಜೆ ನೀಡುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.
Read More News
T & CPrivacy PolicyContact Us