ಅಕ್ಕಿ ಬದಲು,ಹಣ ಕೊಟ್ಟರೆ ಅಕ್ರಮಕ್ಕೆ ಕಡಿವಾಣ ಹಾಕಬಹುದು,ಸಚಿವ ಶರಣಬಸಪ್ಪ ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕಾದರೆ ಅಕ್ಕಿ ಬದಲು ದುಡ್ಡು ಕೊಟ್ಟರೆ. ಅಕ್ರಮಕ್ಕೆ ಕಡಿವಾಣ ಹಾಕಬಹುದು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ್ ಹೇಳಿದರು. ಯಾದಗಿರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯ ಶಹಾಪುರ, ಸುರಪುರ ಗುರುಮಠಕಲ್ ನಗರಗಳಲ್ಲಿ ಅಕ್ರಮ ಅಕ್ಕಿ ದಂಧೆ ನಡೆಯುತ್ತಿರುವ ಕುರಿತು ನನ್ನ ಗಮನಕ್ಕೆ ಬಂದಿತ್ತು, ನಾನು ಅಂದೆ ಅಧಿಕಾರಿಗಳಿಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಿದ್ದೆ. ಗುರುಮಠಕಲ್ ಪಟ್ಟಣದಲ್ಲಿ ಅಕ್ಕಿ ದಾಸ್ತಾನು ಮಾಡಿ ಅಕ್ರಮ ನಡೆಸುತ್ತಿರುವ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ