ನಟ, ಸಾಹಸ ಸಿಂಹ ವಿಷ್ಣುವರ್ಧನ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಮಾಡಲಾಗಿದೆ. ಎಂದು ಸಚಿವ ಹೆಚ್.ಕೆ ಪಾಟೀಲ್ ಗುರುವಾರ ಸಂಜೆ 5:30ರ ಸುಮಾರಿಗೆ ವಿಧಾನಸೌಧದಲ್ಲಿ ತಿಳಿಸಿದರು. ವಿಷ್ಣುವರ್ಧನ್ ಜೊತೆಗೆ ನಟಿ ಬಿ ಸರೋಜ ದೇವಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ, ರಾಷ್ಟ್ರ ಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಸಂಪುಟ ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ ಮಾಡಿದೆ ಎಂದರು.