ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಹೊಸ ಜಾತಿಗಳನ್ನು ಹಿಂದುಳಿದ ಜಾತಿಗಳ ಜತೆಗೆ ಕ್ರಿಶ್ಚಿಯನ್ ಜಾತಿ ಸೃಷ್ಟಿಸಿರುವುದನ್ನು ಕೈಬಿಡಬೇಕೆಂದು ಆಗ್ರಹಿಸಿ ಹಾವೇರಿ ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾ ಘಟಕದ ಪದಾಧಿಕಾರಿಗಳು ಗುರುವಾರ ನಗರದ ಜಿಲ್ಲಾಧಿ ಕಾರಿಗಳ ಕಚೇರಿಯಲ್ಲಿ ಅಪರ ಡಿಸಿಯವರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಕೆ ವೇಳೆ ಮಾತನಾಡಿದ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ನೀಲಪ್ಪ ಚಾವಡಿ ಮಾತನಾಡಿ, 2025ನೇ ಸಾಲಿನಲ್ಲಿ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ಉದ್ದೇಶದಿಂದ ಮತಾಂತರಕ್ಕೆ ಪುಷ್ಠಿ ನೀಡುವ ನಿಟ್ಟಿನಲ್ಲಿ ಹಿಂದು 47 ಜಾತಿಗಳ ಜತೆಗೆ ಕ್ರಿಶ್ಚಿಯನ್ ಪದಗಳನ್ನು ಸೇರಿಸಿ ಅವುಗಳಿಗೆ ಕಾನೂನುಬಾಹಿರವಾಗಿ ಕ್ರಮ ಸಂಖ್ಯೆ ನೀಡಿರುವುದು ಖಂಡನೀಯ ಎಂದರು.