ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿಗೆ ಅನುಮತಿ ಕೊಡಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಅರಮನೆ ಮೈದಾನದಲ್ಲಿ ಆಗಸ್ಟ್ 31ರಂದು ಭಾನುವಾರ ನಡೆದ ಅರಸು ಅಸೋಸಿಯೇಷನ್‌ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಧ್ಯಾಹ್ನ 12 ಗಂಟೆಗೆ ಮಾತನಾಡಿದ ಅವರು, ಬಿಜೆಪಿಯವರು ಧರ್ಮಸ್ಥಳಕ್ಕೆ ಹೋಗಿ ತಮ್ಮ ವೈಯಕ್ತಿಕ ಲಾಭಕ್ಕೆ ಪ್ರಾರ್ಥನೆ ಮಾಡಿಕೊಂಡು ಬರುತ್ತಾರೆಯೇ ಹೊರತು ಬೇರೇನೂ ಇಲ್ಲ. ಇವರ ಹೋರಾಟ ಧರ್ಮಸ್ಥಳದಲ್ಲಿ ಅಲ್ಲ, ಎಲ್ಲಾ ಸಂಸದರು, ಶಾಸಕರನ್ನು ಕರೆದುಕೊಂಡು ಹೋಗಿ ದೆಹಲಿಯಲ್ಲಿ ಹೋರಾಟ ಮಾಡಬೇಕು ಎಂದರು