ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷಾ ಕಾರ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತಿದ್ದು ಜಿಲ್ಲೆಯಲ್ಲಿ ಈ ಸಮೀಕ್ಷೆಗೆ ಸಹಕಾರ ನೀಡುವಂತೆ ನಗರದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಸೋಮವಾರ ಸಂಜೆ 6ಕ್ಕೆ ಪ್ರಕಟಣೆ ಮೂಲಕ ಕೋರಿದ್ದಾರೆ. ಸಮೀಕ್ಷೆಯ ಪೂರ್ವದಲ್ಲಿ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಇಂಧನ ಇಲಾಖೆಯ (ಹೆಸ್ಕಾಂ) ವಿದ್ಯುತಶಕ್ತಿ ಮೀಟರ್ ರೀಡರಗಳಿಂದ ಮನೆಗಳ ಪಟ್ಟಿಯನ್ನು ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ.