ಸಂತಾನ ಹರಣ ಶಾಸ್ತ್ರ ಚಿಕಿತ್ಸೆಗೆ ಬಂದ ಮಹಿಳೆಯೊಬ್ಬರು ವೈದ್ಯರ ನಿರ್ಲಕ್ಷಕ್ಕೆ ಒಳಗಾಗಿ, ಪ್ರಾಣ ಕಳೆದುಕೊಂಡಿರುವ ಘಟನೆಯೊಂದು ಕೊಪ್ಪಳದ ಹಿರೇವಂಕಲಕುಂಟಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ರತ್ನಾಪುರ ಹಟ್ಟಿ ಗ್ರಾಮದ ನಿವಾಸಿ ಮಲ್ಲಮ್ಮ ಕಲ್ಲೂರ್ ಎಂಬ ಮಹಿಳೆ ಶಸ್ತ್ರ ಚಿಕಿತ್ಸೆಗೆ ಎಂದು ತಮ್ಮ ತವರು ಮನೆ ಯಲಬುರ್ಗಾ ತಾಲೂಕಿನ ಗಾನದಾಳ ಗ್ರಾಮದಿಂದ ಹಿರೇವಂಕಲಕುಂಟ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದರು. ಮಂಗಳವಾರ ಬೆಳಿಗ್ಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಬಂದಿದ್ದು ಮಧ್ಯಾಹ್ನದ ವೇಳೆ ಶಸ್ತ್ರಚಿಕಿತ್ಸೆ ನಡೆಯುವ ಸಮಯದಲ್ಲಿ ಮಹಿಳೆ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು ಸದ್ಯ ಮಹಿಳೆಯನ್ನ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನಿಸುವ ವೇಳೆ ಸಾವನ್ನಪ್ಪಿದ್ದಾಳೆ.