ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮಂಗಲ ಗ್ರಾಮದ ಸಮೀಪದ ರಸ್ತೆಯಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚೆಗೆ ಇದೇ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಕಾಡಾನೆ ದಾಳಿ ನಡೆಸಲು ಯತ್ನಿಸಿತ್ತು. ಆ ದಾಳಿಯಿಂದಾಗಿ ಬಿದ್ದು ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಕಾಡಾನೆಗಳ ಹಿಂಡು ಕಾಣಿಸಿಕೊಂಡಿರುವುದು, ಇತ್ತೀಚಿನ ಘಟನೆಗಳನ್ನು ಮೆಲುಕು ಹಾಕಿದಾಗ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಕಾಡು ಪ್ರದೇಶದಿಂದ ಹೊರಬಂದು ರಸ್ತೆವರೆಗೂ ಬಂದಿರುವ ಆನೆಗಳು ಯಾವುದೇ ಕ್ಷಣದಲ್ಲಿ ದಾಳಿ ನಡೆಸಬಹುದಾದ ಸಾಧ್ಯತೆ ಇರುವುದರಿಂದ, ಸೂಕ್ತ ಕ್ರಮಕ್ಕ ಒತ್ತಾಯಿಸಿದ್ದಾರೆ