ರೈತರ ಹಾನಿಯಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಾಗಲಕೋಟೆ ನಗರದಲ್ಲಿಂದು ರೈತರು ಪ್ರತಿಭಟನೆ ನಡೆಸಿದರು. ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು. ಬೆಳೆಗಳಿಗೆ ಸೂಕ್ತ ನ್ಯಾಯಯುತ ಪರಿಹಾರ, ಕಾಲುವೆಗಳಿಗೆ ನೀರು ಹರಿಸುವುದು,ನದಿಗಳ ಹೂಳೆತ್ತುವುದು, ಕೃಷ್ಣ ಮೇಲ್ದಂಡೆ ಯೋಜನೆ ಮೂತಲರನೇ ಹಂತದ ಕಾಮಗಾರಿ ಪೂರ್ಣಗೊಳಿಸವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತಿ.