ಯಡ್ರಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾವನ್ನು ಬೆಳೆದಿದ್ದ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. NDPS ಕಾಯ್ದೆ ಅಡಿ ನಡೆಸಿದ ಕಾರ್ಯಾಚರಣೆಯಲ್ಲಿ 12 ಲಕ್ಷ ಮೌಲ್ಯದ 12 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿತನನ್ನು ಬಂಧಿಸಿದ ಪೊಲೀಸರು, ಕಾನೂನು ಕ್ರಮವಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಶನಿವಾರ ಏಳು ಗಂಟೆಗೆ ಪೊಲೀಸರು ಮಾಹಿತಿ ನೀಡಿದ್ದಾರೆ...