ಬೆಟಗೇರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಬೆಟಗೇರಿ ಪೊಲೀಸ್ ಠಾಣೆಯ ಪಿಎಸ್ಐ ಬಾಲಕನ ಮೇಲೆ ದರ್ಪ ತೋರಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹತ್ತು ವರ್ಷದ ಬಾಲಕ, ವೃದ್ಧರು ಹಾಗೂ ಮಹಿಳೆಯರ ಮೇಲೆ ಪಿಎಸ್ಐ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಪೊಲೀಸ್ ಅಧಿಕಾರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.