ಹುಬ್ಬಳ್ಳಿಯಲ್ಲಿ ರೌಡಿಶೀಟರನೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ ಮಂಟೂರ್ ರೋಡ್ ಅಂಬೇಡ್ಕರ್ ಕಾಲೊನಿ ನಿವಾಸಿ ಬಾಲಾಜಿ ಸಾಕಿ ಎಂಬ ರೌಡಿಶೀಟರ್ ಆತ್ಮ ಹತ್ಯೆಗೆ ಯತ್ನಿಸಿದ್ದು ಕೂಡಲೇ ಗಾಯಗೊಂಡ ಆತನನ್ನು ಕುಟುಂಬದವರು ಹಾಗೂ ಸ್ಥಳೀಯರು ಸೇರಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಾಜಿ ಸಾವನ್ನಪ್ಪಿದ್ದಾನೆ.ಈ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ