ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಪುರಸಭೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ಸನ್ಮಾನ ಕಾರ್ಯಕ್ರಮವನ್ನು ಭಾನುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಶಾಸಕ ಅಶೋಕ ಮನಗೂಳಿ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ನಗರವನ್ನು ಸ್ವಚ್ಛವಾಗಿರಲು ಪೌರಕಾರ್ಮಿಕರ ಕೊಡುಗೆ ಅಪಾರವಾಗಿದೆ ಇಂದು ಅವರನ್ನು ಸನ್ಮಾನಿಸುತ್ತಿರುವುದು, ಉತ್ತಮ ಕಾರ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆಯ ಅಧಿಕಾರಿಗಳು ಪೌರಕಾರ್ಮಿಕರು ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.