ಈಚರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗೇಟ್ ಬಳಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ವಿನುತಾ, ಅರ್ಚನಾ, ಸಚಿನ್, ಸಂಜಯ್ ಎಂಬವರು ಗಾಯಗೊಂಡವರು. ಅಪಘಾತ ಆಗುತ್ತಿದ್ದಂತೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಗುಂಡ್ಲುಪೇಟೆ ಕಡೆಯಿಂದ ಬರುತ್ತಿದ್ದ ಮಹಾರಾಷ್ಟ್ರ ನೋಂದಣಿ ಲಾರಿ ಹಾಗೂ ಮೈಸೂರು ಕಡೆಯಿಂದ ಬರುತ್ತಿದ್ದ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ವಾಹನಗಳು ಜಖಂಗೊಂಡಿದೆ. ಗುಂಡ್ಲುಪೇಟೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.