ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಅಡಿ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಹಲವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಅರ್ ದಾಖಲಾಗಿದೆ.ಗುರುವಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಮಾಡಲು ಬ್ರಹ್ಮಾವರ ಪೊಲೀಸರು ತಿಮರೋಡಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಮತ್ತು ಇತರರು ಪೊಲೀಸರಿಗೆ ಅಡ್ಡಿ ಪಡಿಸಿದ್ದರು. ಈ ಕಾರಣಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ನಂತರ ವಿಚಾರಣೆಗೆ ಹಾಜರಾಗಲು ಬೆಳ್ತಂಗಡಿ ಎಸ್‌ಐಟಿ ಠಾಣೆಗೆ ಗಿರೀಶ್ ಮಟ್ಟಣ್ಣನವರ್ ಆಗಮಿಸಿದ್ದರು. ಕೆಲ ಕಾಲ ಪೊಲೀಸರು ವಿಚಾರಣೆ ನಡೆಸಿ ಮಟ್ಟಣ್ಣನವರ್ ಅವರನ್ನು ಬಿಟ್ಟು ಕಳುಹಿಸಿದ್ದಾರೆ.