ನಾಪೋಕ್ಲು : ಗೌರಿ ಗಣೇಶೋತ್ಸವದ ಅಂಗವಾಗಿ ನಾಪೋಕ್ಲು ಪಟ್ಟಣದ ವಿವಿಧ ಗಣೇಶೋತ್ಸವ ಸೇವಾ ಸಮಿತಿಗಳ ವತಿಯಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ನಾಪೋಕ್ಲುವಿನ ವಿವೇಕಾನಂದ ಸಮಿತಿ ವತಿಯಿಂದ ಇಂದಿರಾನಗರದಲ್ಲಿ, ಶ್ರೀ ರಾಮ ಟ್ರಸ್ಟ್ ವತಿಯಿಂದ ಗುರು ಪೊನ್ನಪ್ಪಸಭಾಂಗಣದಲ್ಲಿ, ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ವಿನಾಯಕ ಸೇವಾ ಸಮಿತಿ ವತಿಯಿಂದ ಹಳೇತಾಲೂಕಿನ ಶ್ರೀಪೊನ್ನು ಮುತ್ತಪ್ಪ ದೇವಾಲಯದಲ್ಲಿ, ನಾಪೋಕ್ಲುನಾಡು ಗೌರಿಗಣೇಶ ಸಮಿತಿ ವತಿಯಿಂದ ಹಳೇ ತಾಲೂಕಿನ ಶ್ರೀ ಭಗವತಿ ದೇವಾಲಯದಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು.ನಾಪೋಕ್ಲು ಪಟ್ಟಣದ ಮಾರುಕಟ್ಟೆ ಬಳಿಯಿಂದ ಪಟ್ಟಣದ ಮುಖ್ಯಬೀದಿಗಳಲ್ಲಿ ಸಾಂಪ್ರದಾಯಿಕ ವಾಲಗ, ಕೇರಳದ ಚೆಂಡೆ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಗಣೇಶ