ಕೇಂದ್ರ ಸರ್ಕಾರ ದೇಶದ ಕ್ರೀಡಾ ಕ್ಷೇತ್ರವನ್ನು ಮತ್ತೊಂದು ಮಹತ್ವದ ಘಟ್ಟಕ್ಕೆ ಕೊಂಡೊಯ್ಯಲು ದೇಶದ ಇತಿಹಾಸದಲ್ಲಿ ಮೊದಲ ಪ್ರಯತ್ನವಾಗಿ ದೇಶದಾದ್ಯಂತ ಜಾರಿಗೆ ತಂದಿರುವ “ಸಂಸದ್ ಖೇಲ್ ಮಹೋತ್ಸವ್-2025” ನೋಂದಣಿ ಪ್ರಕ್ರಿಯೆಗೆ ಇಂದು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಬಿ ವೈ ರಾಘವೇಂದ್ರ ಅವರು ಚಾಲನೆ ನೀಡಿದರು ದೇಶ ಸಮಯದಲ್ಲಿ ಮಾತನಾಡಿದ ಅವರು ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2030 ರಲ್ಲಿ “ಕಾಮನ್ ವೇಲ್ತ್ ಗೇಮ್ಸ್” ಹಾಗೂ 2036 ರಲ್ಲಿ “ಒಲಿಂಪಿಕ್ ಗೇಮ್ಸ್” ಆಯೋಜನೆ ಮಾಡಲು ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿದೆ ಎಂದರು.