ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಡಾಣಾಪುರು ಗ್ರಾಮದಲ್ಲಿ ಭಾರತೀಯ ಕ್ರಾಂತಿಕಾರಿ ಕೀಸಾನ್ ಸೇವಾ ಸಂಘದ ಗ್ರಾಮ ಘಟಕ ಉದ್ಘಾಟನೆ ಇಂದು ನಡೆಯಿತು. ಸೆಪ್ಟೆಂಬರ್ 01 ರಂದು ಬೆಳಗ್ಗೆ 11-30 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷ ಎಂ.ಎನ್ ಕುಕನೂರು ಅವರು ನಾಮಫಲಕ ಅನಾವರಣ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಾಣಾಪುರ ಗ್ರಾಮ ಘಟಕದ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರು ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು