ಬೆಳೆ ಹಾನಿಗೆ ಸೂಕ್ತ ಪರಿಹಾರವನ್ನ ಒದಗಿಸಲಾಗುವುದು ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ್ ಅವರು ಹೇಳಿದ್ದಾರೆ.ಬಾಗಲಕೋಟೆ ನಗರದ ಜಿಲ್ಲಾಡಳಿತಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿತುವ ಅವರು ಮುಧೋಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾಗಿ ತಿಳಿಸಿದ್ದಾರೆ.ಪ್ರವಾಹದ ಸಂದರ್ಬದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಹಾಗು ಜಾನುವಾರುಗಳು ಸಾವನ್ನಪ್ಪಿದ ಕುಟುಂಬಸ್ಥರಿಗೆ ತಕ್ಷಣ ಪರಿಹಾರನೀಡುವ ಕೆಲಸವಾಗಿದೆ ಎಂದು ತಿಳಿಸಿದರು.ಇನ್ನು ವಾಡಿಕೆಗಿಂತ ಹೆಚ್ಚಾಗಿ ಸುರಿದ ಮಳೆಯಿಂದಾಗಿ ಹಾನಿಗೆ ಒಳಗಾದ ಮನೆಗಳ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.ಇನ್ನು ಈ ಕುರಿತು ಅವರು ಮಾತನಾಡಿ ಮಾಹಿತಿ ನೀಡಿದ್ದಾರೆ.