ವಿಜಯಪುರ ನಗರದಲ್ಲಿ 15ನೇ ದಿನದ ಗಣೇಶ ವಿಸರ್ಜನೆ ಕಾರ್ಯಕ್ರಮವು ಬುದುವಾರ ಮಧ್ಯಾನ 3ಗಂಟೆ ಸುಮಾರಿಗೆ ಅದ್ದೂರಿಯಾಗಿ ಜರುಗಿತು. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತನಲ್ಲಿ ಗಣೇಶ ಮೂರ್ತಿಗಳ ಭವ್ಯ ಮೆರವಣಿಗೆ ಜರುಗಿತು. ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದಿಂದ ತಾಜಬಾವಡಿವರೆಗೂ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಯುವಕರು ನೃತ್ಯದೊಂದಿಗೆ ಮಾಡುವ ಮೂಲಕ ಭಾಗಿಯಾಗಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ 15ನೇ ದಿನದ ಗಣೇಶ ವಿಸರ್ಜನೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.