ಆಗಸ್ಟ್ 27ರಂದು ಸಂಜೆ 6 ಗಂಟೆಗೆ ತುಮಕೂರಿನ ಸಿದ್ಧಿವಿನಾಯಕ ಸಮುದಾಯ ಭವನದಲ್ಲಿ ಶ್ರೀ ಸಿದ್ಧಿವಿನಾಯಕ ಸೇವಾ ಮಂಡಳಿ ವತಿಯಿಂದ 49ನೇ ವರ್ಷದ 28 ದಿನಗಳ ದೃಶ್ಯಾವಳಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಬಗ್ಗೆ ಶ್ರೀ ಸಿದ್ದಿ ವಿನಾಯಕ ಸೇವಾ ಮಂಡಳಿ ಉಪಾಧ್ಯಕ್ಷರಾದ ಟಿ.ಎಚ್ ಪ್ರಸನ್ನ ಕುಮಾರ್ ಅವರು ಮಾಹಿತಿ ನೀಡಿದರು.ಅವರು ತುಮಕೂರಿನ ಸಿದ್ದಿ ವಿನಾಯಕ ಸಮುದಾಯ ಭವನದಲ್ಲಿ ಕರೆದಿದ್ದ ಮಾಧ್ಯಮಗೋಷ್ಠಿನ ಉದ್ದೇಶಿಸಿ ಶುಕ್ರವಾರ ಬೆಳಿಗ್ಗೆ 11.30 ರ ಸಮಯದಲ್ಲಿ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದರು.