ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಟೋಲ್ ಬೂತ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಅವೈಜ್ಞಾನಿಕವಾಗಿ ರಸ್ತೆಯಲ್ಲಿ ಹಂಪ್ ಹಾಕಿದ್ದು ಬೈಕ್ ಸವಾರರು ಬೀಳುವ ಪ್ರಕರಣಗಳು ದಿನನಿತ್ಯ ಬೆಳಕಿಗೆ ಬರುತ್ತಿದ್ದು ಚಿಕ್ಕ ಪುಟ್ಟ ವಾಹನಗಳಿಗೆ ಹಾನಿಯಾಗುತ್ತಿದೆ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ.