ಪಟ್ಟಣದಲ್ಲಿ ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಸಾವು ಗುಂಡ್ಲುಪೇಟೆ ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣ ಸಮೀಪ ನಡೆದ ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಮನೋಜ್(23) ಮೃತ ಬೈಕ್ ಸವಾರ. ರಾಘವಾಪುರ ಗ್ರಾಮದ ಅಭಿ, ಹೆಗ್ಗಡಹಳ್ಳಿ ಗ್ರಾಮದ ಮಹೇಶ್ ಎಂಬುವವರಿಗೆ ತೀವ್ರ ಗಾಯಗಳಾಗಿದೆ. ಕೇರಳದಿಂದ ಗುಂಡ್ಲುಪೇಟೆ ಮಾರ್ಗವಾಗಿ ಮೈಸೂರು ಕಡೆಗೆ ತೆರಳುತ್ತಿದ್ದ ಕೇರಳ ನೋಂಣಿಯ ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತವಾಗಿತ್ತು.