ವಿಜಯಪುರ ನಗರದ ಐತಿಹಾಸಿಕ ಸ್ಮಾರಕ ಅಸರ್ ಮಹಲಗೆ ಶುಕ್ರವಾರ ಮಧ್ಯಾಹ್ನ 3 ಸುಮಾರಿಗೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಐತಿಹಾಸಿಕ ಸ್ಮಾರಕ ಅಭಿವೃದ್ಧಿಗೆ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲಿದ್ದು ಇನ್ನು ಸಾರ್ವಜನಿಕರು ಸಹಕಾರ ನೀಡಬೇಕು ಸ್ಮಾರಕದಲ್ಲಿ ಸ್ವಚ್ಛತೆಗೆ ಜನರು ಸಹಕರಿಸಬೇಕು ಎಂದು ಸೂಚನೆ ನೀಡಿದರು ಇನ್ನು ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.